Top Songs By C. Aswath
Credits
AUSFÜHRENDE KÜNSTLER:INNEN
C. Aswath
Schauspieler:in
KOMPOSITION UND LIEDTEXT
C. Aswath
Komponist:in
Ku.Vem.Pu
Songwriter:in
Lyrics
ಗುಡಿ ಚರ್ಚು ಮಸಜೀದಿಗಳ ಬಿಟ್ಟು ಹೊರಬನ್ನಿ
ಬಡತನವ ಬುಡಮಟ್ಟ ಕೀಳಬನ್ನಿ
ಮೌಢ್ಯತೆಯ ಮಾರಿಯನು ಹೊರದೂಡಲೈತನ್ನಿ
ವಿಜ್ಞಾನ ದೀವಿಗೆಯ ಹಿಡಿಯ ಬನ್ನಿ
ಓ, ಬನ್ನಿ, ಸೋದರರೆ, ಬೇಗ ಬನ್ನಿ ।।
ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ;
ಮತಿಯಿಂದ ದುಡಿಯಿರೈ ಲೋಕಹಿತಕೆ.
ಆ ಮತದ ಈ ಮತದ ಹಳೆಮತದ ಸಹವಾಸ
ಸಾಕಿನ್ನು ಸೇರಿರೈ ಮನುಜ ಮತಕೆ.
ಓ, ಬನ್ನಿ ಸೋದರರೆ ವಿಶ್ವಪಥಕೆ ।। ಗುಡಿ ।।
Writer(s): C Aswath, Ku. Vem. Pu
Lyrics powered by www.musixmatch.com